ಇತ್ತೀಚಿನ ಸುದ್ದಿ
ಸೆಲ್ಫಿ ಹುಚ್ಚು: ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ಇಬ್ಬರು ಪಿಯು ವಿದ್ಯಾರ್ಥಿಗಳು ಸಾವು
19/09/2022, 19:07

ರಾಯಚೂರು(reporterkarnataka.com): ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಪಿಯು ವಿದ್ಯಾರ್ಥಿಗಳು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ.
ಪಿಕ್ನಿಕ್ ಗಾಗಿ ಬಂದಿದ್ದ ವಿದ್ಯಾರ್ಥಿಗಳು ನಿನ್ನೆ ಸಂಜೆ ಸೆಲ್ಫಿ ತೆಗೆಯಲು ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು.
ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.