9:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿಯ ಆತ್ಮಸ್ಥೈರ್ಯದಿಂದಲೇ ಕಡಿಮೆ ಅವಧಿಯಲ್ಲಿ ಹಿರಿಯ ಸಾಧನೆ: ಬೋಳಾರದಲ್ಲಿ 34ನೇ ಶಾಖೆ ಉದ್ಘಾಟಿಸಿ ಮಾಜಿ ಸಚಿವ ಪಾಲೆಮಾರ್ ಅಭಿಪ್ರಾಯ

25/03/2026, 20:54

ಮಂಗಳೂರು(reporterkarnataka.com): ಆತ್ಮಶಕ್ತಿ ಎಂದರೆ ಧೈರ್ಯ. ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಠೇವಣಿ ಇಟ್ಟರೆ ಧೈರ್ಯ ಸಿಗುತ್ತದೆ. ಆತ್ಮಶಕ್ತಿಯ ಆತ್ಮಸ್ಥೈರ್ಯದಿಂದಲೇ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಭಿಪ್ರಾಯಪಟ್ಟರು.
ಮಂಗಳಾದೇವಿ ಸಮೀಪದ ಬೋಳಾರ ಜೆಪ್ಪು ಮಾರ್ಕೆಟ್ ಭಗಿನಿ ಸಮಾಜದ ಬಳಿಯ ಯುನಿಕ್ ಸ್ಟ್ರೀಕ್ ಕಾಂಪ್ಲೆಕ್ಸ್ ನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಬೋಳಾರ ಶಾಖೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಪ್ರತಿಯೊಂದು ನಡೆಯಲ್ಲಿ ಏನಾದರೊಂದು ವಿಶೇಷತೆ ಇರುತ್ತದೆ. ಆತ್ಮಶಕ್ತಿ ಎಂಬ ಹೆಸರೇ ವಿಶೇಷವಾದುದು. ಈ ಹೆಸರು ಇಟ್ಟವರನ್ನೂ ಸನ್ಮಾನಿಸಬೇಕು. ಒಂದು ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ವೇಳೆ ಸಹಕಾರಿ ಕ್ಷೇತ್ರದ ಅಧಿಕಾರಿಗಳು ಹಾಜರಿರುವುದು ಎಂದರೆ ಆತ್ಮಶಕ್ತಿ ಸಹಕಾರಿ ಸಂಘವು ಎಷ್ಟು ಗಟ್ಟಿಯಾಗಿ ಬೆಳೆದಿದೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬಹುದು ಎಂದು ಪಾಲೆಮಾರ್ ಹೇಳಿದರು.
ಸಹಕಾರಿ ಸಂಘಗಳು ಉನ್ನತ ಮಟ್ಟದ ಸಾಧನೆ ಮಾಡಿ ಬೆಳೆಯಬೇಕಾದರೆ ಸಹಕಾರಿಗಳ ಪರಸ್ಪರ ಸಹಕಾರ ಬೇಕು. 14 ವರ್ಷದಲ್ಲಿ 34 ಶಾಖೆಗಳನ್ನು ತೆರೆಯುವುದು ಎಂದರೆ ಸಾಮಾನ್ಯದ ಮಾತಲ್ಲ. ಇದಕ್ಕೆ ಆತ್ಮಶಕ್ತಿಯ ಜೊತೆಗೆ ಆತ್ಮಸ್ಥೈರ್ಯವೂ ಬೇಕು. ಸಂಘದ ನಿರ್ದೇಶಕರಲ್ಲಿ ಆ ರೀತಿಯ ಆತ್ಮಸ್ಥೈರ್ಯ ಇರುವುದರಿಂದಲೇ ಇಷ್ಟೊಂದು ಕಡಿಮೆ ಅವಧಿಯಲ್ಲಿ 34 ಶಾಖೆ ತೆರೆದು 300 ಕೋಟಿ ರೂ. ಮೀರಿದ ಠೇವಣಿ ಸಂಗ್ರಹ ಸಾಧ್ಯವಾಗಿದೆ. ಸಂಘದ ನಿರ್ದೇಶಕರು, ಸದಸ್ಯರು ಏಕ ಮನಸ್ಸಿನಿಂದ ಸಾಮಾಜಿಕ ಕಳಕಳಿ, ಸೇವಾ ಮನೋಭಾವದಿಂದ ಕೆಲಸ ಮಾಡಿದ್ದರಿಂದ ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ. ಆತ್ಮಶಕ್ತಿ ಸಹಕಾರಿ ಸಂಘದಿಂದ ಜನರಿಗೆ ಆತ್ಮಸ್ಥೈರ್ಯ ತುಂಬಿಸುವ ಕೆಲಸವಾಗಲಿ ಎಂದು ಶುಭ ಹಾರೈಸಿದರು.
ಸಮಾಜ ಸೇವಕಿ ತಾರಾ ಹೇಮಚಂದ್ರ ಅವರು ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿದರು. ಭದ್ರತಾಕೋಶ ಉದ್ಘಾಟನೆ ಮಾಡಿದ ಮಂಗಳೂರು ಕೋ-ಆಪರೇಟಿವ್ ಬಿಲ್ಡಿಂಗ್ ಸೊಸೈಟಿಯ ಅಧ್ಯಕ್ಷರಾದ ರಂಜನ್ ಮಿಜಾರ್ ಅವರು ಮಾತನಾಡಿ, ಮುಂದಿನ ಐದು ವರ್ಷದಲ್ಲಿ ಆತ್ಮಶಕ್ತಿ ಸಹಕಾರಿ ಸಂಘದ ಐವತ್ತು ಶಾಖೆಗಳು ಆಗಿ ಸಾವಿರಾರು ಜನರಿಗೆ ಉಪಯೋಗವಾಗಲಿ ಎಂದು ಶುಭ ಹಾರೈಸಿದರು.
ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಸಿ. ಪ್ರಸಾದ್ ರೆಡ್ಡಿ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಿ ಮಾತನಾಡಿ, ಆತ್ಮಶಕ್ತಿ ಸಹಕಾರ ಸಂಘದ ದೃಢಚಿತ್ತದಿಂದ ಇಷ್ಟೊಂದು ಕಡಿಮೆ ಅವಧಿಯಲ್ಲಿ 34 ಶಾಖೆ ತೆರೆಯುವಂತೆ ಆಗಿದೆ. ಯಾವುದೇ ಒಂದು ಸಹಕಾರಿ ಸಂಘ ಸ್ಥಾಪನೆ ಆದಾಗ ಅದಕ್ಕೊಂದು ಗುರಿ ಇರುತ್ತದೆ. ಆದರೆ ಅಷ್ಟೆ ಸಾಕಾಗದು. ಸೇವಾ ಮನೋಭಾವ, ದೃಢ ಸಂಕಲ್ಪ, ಧೈರ್ಯವೂ ಬೇಕು. ಇವೆಲ್ಲವೂ ಇದ್ದರೆ ಉನ್ನತ ಸಾಧನೆ ಮಾಡಬಹುದು. ಆತ್ಮಶಕ್ತಿ ಸಹಕಾರಿ ಸಂಘವು ಅದನ್ನು ಮಾಡಿ ತೋರಿಸಿದೆ. ನಿಸ್ವಾರ್ಥ ಮನೋಭಾವದಿಂದ ಇವೆಲ್ಲವನ್ನೂ ಮಾಡಿದರೆ ಪ್ರಗತಿ ಸಾಧಿಸಲು ಸಾಧ್ಯವಿದೆ. ನಂಬಿಕೆ ಇದ್ದರಷ್ಟೆ ಒಂದು ಸಹಕಾರಿ ಸಂಘದಲ್ಲಿ ಠೇವಣಿ ಇಡುತ್ತಾರೆ. ಆ ನಂಬಿಕೆ ಆತ್ಮಶಕ್ತಿ ಸಹಕಾರಿ ಸಂಘದ ಮೇಲಿರುವುದರಿಂದಲೇ ದೊಡ್ಡ ಮಟ್ಟದಲ್ಲಿ ಠೇವಣಿ ಸಂಗ್ರಹಿಸಲೂ ಸಾಧ್ಯವಾಗಿದೆ. ಆತ್ಮಶಕ್ತಿ ಸಹಕಾರಿ ಸಂಘದ ಉದ್ಯೋಗಿಗಳಲ್ಲಿ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳೇ ಇರುವುದು ಕೂಡ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಸಂಸ್ಥೆಯ ದೂರದೃಷ್ಟಿಯನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.
ನಿರಖು ಠೇವಣಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸರ್ವವ್ಯಾಪಿ, ಸರ್ವಸ್ಪರ್ಶಿ ಎಂಬ ಕಲ್ಪನೆಯಲ್ಲಿ ಆತ್ಮಶಕ್ತಿ ಸಹಕಾರಿ ಸಂಘದ ಕೆಲಸ ನಡೆದಿದೆ. 14 ವರ್ಷದಲ್ಲಿ 34 ಶಾಖೆ ತೆರೆಯುವುದು ಸುಲಭದ ಕೆಲಸವಲ್ಲ. ಸರ್ವವ್ಯಾಪಿ, ಸರ್ವಸ್ಪರ್ಶಿ ಎಂಬ ಕಲ್ಪನೆಯಿರುವುದರಿಂದಲೇ ಅದು ಸಾಧ್ಯವಾಗಿದೆ. ಒಂದು ಆರ್ಥಿಕ ಸಂಸ್ಥೆ ಲಾಭ ಗಳಿಕೆಯನ್ನಷ್ಟೇ ತಮ್ಮ ಕೆಲಸ ಎಂದು ಅಂದುಕೊಳ್ಳದೆ ನಿರಂತರ ಸೇವಾ ಮನೋಭಾವದಿಂದ ಕೆಲಸ ಮಾಡಿದಾಗಷ್ಟೇ ಉನ್ನತ ಪ್ರಗತಿ ದಾಖಲಿಸಬಹುದು. ಆತ್ಮಶಕ್ತಿ ಸಹಕಾರಿ ಸಂಘವು ಅದನ್ನು ಮಾಡಿ ತೋರಿಸಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಆತ್ಮಶಕ್ತಿ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಹೊಸ ಶಾಖೆಗೆ ಇದುವರೆಗೆ ರೂ. ಮೂರು ಕೋಟಿ ಗೂ ಮಿಕ್ಕಿ ಠೇವಣಿ ಸಂಗ್ರಹಿಸಲಾಗಿದೆ. ಈ ತಿಂಗಳಾಂತ್ಯದೊಳಗೆ 10 ಕೋಟಿ ರೂ. ಠೇವಣಿ ಸಂಗ್ರಹಿಸುವ ಗುರಿ ಇಡಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಇರಲಿ ಎಂದು ಆಶಿಸಿದರು.
ಮಂಗಳಾದೇವಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಅಶೋಕ್ ಕುಮಾರ್ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಿದರು. ದ.ಕ. ಜಿಲ್ಲಾ ಅಮೆಚೂರ್ ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾದ ದಿಲ್‌ರಾಜ್ ಆಳ್ವ ಭವಿಷ್ಯ ಸುರಕ್ಷಾ ಯೋಜನೆಗೆ ಚಾಲನೆ ನೀಡಿದರು. ಬಿಲ್ಲವ ಸಂಘ ಮಂಗಳಾದೇವಿಯ ಅಧ್ಯಕ್ಷರಾದ ರಾಜರತ್ನ ಸನಿಲ್ ಉಳಿತಾಯ ಖಾತೆಗೆ ಚಾಲನೆ ನೀಡಿದರು. ದ.ಕ. ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. ಆವರ್ತನ ಠೇವಣಿಗೆ ಚಾಲನೆ ನೀಡಿದರು. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಭಾನುಮತಿ ಪಿಗ್ಮಿ ಖಾತೆಗೆ ಚಾಲನೆ ನೀಡಿದರು. ಉದ್ಯಮಿ ರಮಾನಂದ ಪೂಜಾರಿ ಹಾಗೂ ಕಟ್ಟಡದ ಮಾಲಿಕರಾದ ಜೆನೆಟ್ ಮೆಲ್ವಿನ್ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಆತ್ಮಶಕ್ತಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ ಎನ್., ರಮಾನಾಥ ಸನಿಲ್, ಮುದ್ದು ಮೂಡುಬೆಳ್ಳೆ, ದಿವಾಕರ್ ಬಿ.ಪಿ., ಗೋಪಾಲ್ ಎಂ., ಉಮಾವತಿ, ಮತ್ತಿತ್ತರರು ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿ, ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. ವಂದಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಜೊತೆ ಕಾರ್ಯದರ್ಶಿ ವಿಶ್ವನಾಥ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು