6:33 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತರು, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ. ಬಾಲಕೃಷ್ಣ ಗಟ್ಟಿ ವಿಧಿವಶ

12/06/2026, 21:52

ಬಂಟ್ವಾಳ(reporterkarnataka.com): ಬಂಟ್ವಾಳ ಎಸ್.ವಿ. ಎಸ್.ಕಾಲೇಜಿನಲ್ಲಿ‌ ಅರ್ಥಶಾಸ್ತ್ರ ಉಪನ್ಯಾಸಕರಾಗಿ , ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಪ್ರೊ.ಬಾಲಕೃಷ್ಣ ಗಟ್ಟಿ (83) ಅವರು ಮಂಗಳೂರಿನಲ್ಲಿ ನೆಲೆಸಿದ್ದು ಇಂದು ಬೆಳಿಗ್ಗೆ ನಿಧನರಾದರು.
ಮೂಲತಃ ಕಾಸರಗೋಡಿನ ಕುಂಬಳೆಯ ಹಿರಿಯ ಸಾಮಾಜಿಕ ಮುಖಂಡ ದಿ.ಮಹಾಲಿಂಗ ಗಟ್ಟಿಯವರ ಪುತ್ರ. ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ‌ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿದ್ದರು. ಕೆಲವು ಕಾಲೇಜೊಂದರಲ್ಲಿ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.
ಜೊತೆಗೆ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ‌ಪತ್ರಿಕೆಯ ಬಂಟ್ವಾಳದಲ್ಲಿ ವರದಿಗಾರರಾಗಿದ್ದರು. ನೇತ್ರಾವತಿ ವಾರ್ತೆ ದಿನಪತ್ರಿಕೆ ಯನ್ನು ಪ್ರಾರಂಭಿಸಿ‌ ಸಂಪಾದಕರಾಗಿ ಮನ್ನಡೆಸಿದ್ದು ಅನೇಕ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದರು. 1998ರಿಂದ‌2003ರ ವರೆಗೆ ಜನವಾಹಿನಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸಿದ್ದರು. ಸರಳ, ನಿಷ್ಠುರ ಬರೆವಣಿಗೆಗಳ ಮೂಲಕ ಪತ್ರಿಕಾರಂಗದಲ್ಲಿ ದಶಕಗಳ ಕಾಲ ಗುರುತಿಸಲ್ಪಟ್ಡಿದ್ದ ಅವರು ಬಂಟ್ವಾಳ ತಾಲೂಕು ಗ್ರಾಮೀಣ ಪತ್ರಕರ್ತರ ‌ಸಂಘ‌ವನ್ನು ಸ್ಥಾಪನೆ ಮಾಡಿ ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಉತ್ತಮ ವಾಗ್ಮಿಯಾಗಿದ್ದ ‌ಅವರು ಎಡಪಂಥೀಯ ಚಿಂತನೆಗಳಿಂದ ಆಕರ್ಷಿತರಾಗಿದ್ದರು.
ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ 2024 ನ.12ರಂದು ನಡೆದ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿ ಸಾಹಿತ್ಯ ಪರಿಷತ್ತಿನಿಂದ ಗೌರವಿಸಲ್ಪಟ್ಟಿದ್ದರು.
ಪತ್ನಿ ಹಾಗೂ ವಿದೇಶದಲ್ಲಿರುವ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು