9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು