8:02 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ  

02/05/2022, 21:44

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ  ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 


ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್, ನೂತನ ಕಾರ್ಯದರ್ಶಿ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ, ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ರೈ ಕಾರಮೊಗರುಗುತ್ತು, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಮಂಗಳೂರು ಬ್ಲೂಂನ ಸುರೇಂದ್ರ ಶ್ರೀಯಾನ್, ಅಕ್ಷಯ್, ಸುಮಾ ಮತ್ತಿತ್ತರರು ಭಾಗವಹಿಸಿದ್ದರು.

ಕಳೆದ ಒಂದು ವರ್ಷದಿಂದ ನಿಕಟಪೂರ್ವ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರಿಂದ ಆರಂಭಗೊಂಡ ಈ ಯೋಜನೆಯನ್ನು ಇದೀಗ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಗೆ ಹೆಮ್ಮೆಯ ವಿಚಾರ.

ಇತ್ತೀಚಿನ ಸುದ್ದಿ

ಜಾಹೀರಾತು