6:11 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸೆಪ್ಟೆಂಬರ್ 3: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ; ಸಂಸದ ಸಸಿಕಾಂತ್ ಸೆಂಥಿಲ್ ಉದ್ಫಾಟನೆ

30/08/2024, 21:19

ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಸಾಮರಸ್ಯ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅರಲವರ 27ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಷ್ಟೆಂಬರ್ 3ರಂದು ಮಂಗಳವಾರ ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನದ ಆಶಯಗಳಲ್ಲಿ ಪ್ರೀತಿ ಸಹಬಾಳ್ವೆಯ ಪಯಣ ಎಂಬ ವಿಷಯದಲ್ಲಿ ದ.ಕ‌.ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ.
ವಿಚಾರ ಸಂಕಿರಣವನ್ನು ಸಂಸದ ಸಸಿಕಾಂತ್ ಸೆಂಥಿಲ್ ಅವರು ಉದ್ಘಾಟಿಸಲಿದ್ದು,ವಿಷಯ ಮಂಡನೆಯನ್ನು ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮಾಡಲಿದ್ದಾರೆ. ಸಾಮಾಜಿಕ ಚಿಂತಕರೂ,ಸಾಹಿತಿಗಳಾದ ಆಯೆಷಾ ಫರ್ಝಾನಾ ಯು.ಟಿ. ಅವರು ಪ್ರತಿಕ್ರಿಯೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಅವರು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 8.30ಕ್ಕೆ ಏಕತಾರಿ ಹಾಡುಗಾರರಾದ ನಾದಾ ಮಣಿನಾಲ್ಕೂರು ಹಾಗೂ ಲಿಯೋ ರಾಣಿಪುರರವರಿಂದ ಪ್ರೀತಿಯ ಸಿಂಚನ ಎಂಬ ಸೌಹಾರ್ದ ಗಾಯನ ಕಾರ್ಯಕ್ರಮ ಜರುಗಲಿದೆ.
ಪ್ರೀತಿ ಮತ್ತು ಸೇವೆಯ ಮೂಲಕ ಜಗತ್ತಿಗೆ ಮಹಾತಾಯಿ ಎಂದು ಗರುುತಿಸಿಕೊಂಡಿರುವ ಸಂತ ಮದರ್ ತೆರೇಸಾರವರ ವಿಚಾರಧಾರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಮಹತ್ತರ ಜವಾಬ್ದಾರಿಯನ್ನು ಹೊಂದಿರುತ್ತದೆ. ಕಳೆದ 7 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಲ್ಲಿ ಸರ್ವ ಧರ್ಮದ ಸೌಹಾರ್ದ ಪ್ರಿಯ ಜನತೆ,ವಿದ್ಯಾರ್ಥಿ,ಯುವಜನ, ಮಹಿಳಾ, ದಲಿತ,ಆದಿವಾಸಿ, ರೈತ,ಕಾರ್ಮಿಕ ಸಂಘಟನೆಗಳ ನಾಯಕರು,ಮಧ್ಯಮ ವರ್ಗದ ನೌಕರರು, ಸಾಹಿತಿಗಳು, ಪ್ರಗತಿಪರ ಚಿಂತಕರು, ಶಿಕ್ಷಣ ತಜ್ಞರು, ವಕೀಲರು, ವೈದ್ಯರು, ಬುದ್ದಿಜೀವಿಗಳನ್ನೊಳಗೊಂಡ ಜಾತ್ಯಾತೀತ ನೆಲೆಗಟ್ಟಿನ ಮನಸ್ಸುಗಳು ಸೌಹಾರ್ದ ತಂಡವಾಗಿ ವಿವಿಧ ಹಂತದ ಕಾರ್ಯಕ್ರಮಗಳನ್ನು ವರ್ಷವಿಡೀ ಆಯೋಜಿಸಲಾಗುತ್ತದೆ. ಪ್ರತಿಯೊಂದು ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ಸೌಹಾರ್ದ ದೀಪಾವಳಿ, ಸೌಹಾರ್ದ ಕ್ರಿಸ್ ಮಸ್,ಸೌಹಾರ್ದ ಇಫ್ತಾರ್ ಕೂಟ ಹಾಗೂ ನಾಡಹಬ್ಬ ದಸರಾವನ್ನು ಸಾಮರಸ್ಯ ದಸರಾವನ್ನಾಗಿ ಆಚರಿಸಲಾಗಿದೆ. ಮದರ್ ತೆರೇಸಾರವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಣ್ಣರ ಕಲರವ ಎಂಬ ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಕೂಡ ನಡೆಸಲಾಗಿದೆ. ಸೌಹಾರ್ದತೆ ಹಾಗೂ ಜನತೆಯ ಬದುಕಿನ ಪ್ರಶ್ನೆಗಳು ಎದುರಾದಾಗ ಇತರ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡು ಶಕ್ತಿಮೀರಿ ಶ್ರಮಿಸಲಾಗಿದೆ.
ಮಂಗಳೂರನ್ನು ಮತ್ತೆ ಸಾಮರಸ್ಯದ ತಾಣವನ್ನಾಗಿಸಲು ಕಳೆದ 3 ವರ್ಷಗಳ ಹಿಂದೆ ಜನ್ಮ ತಾಳಿದ ಸಾಮರಸ್ಯ ಮಂಗಳೂರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಂಗಳೂರಿನ ಜನತೆಯ ಹ್ರದಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಸಾಮರಸ್ಯ ಮಂಗಳೂರು ಜನ್ಮ ತಾಳುವಲ್ಲಿ ಪ್ರಮುಖ ಕಾರಣಿಕರ್ತರಾದ ಮಾಜಿ ಜಿಲ್ಲಾಧಿಕಾರಿಗಳಾದ ಸಸಿಕಾಂತ್ ಸೆಂಥಿಲ್ ಅವರು ದ.ಕ.ಜಿಲ್ಲೆಯ ಕೊಮುವಾದಿ ರಾಜಕಾರಣವನ್ನು ಕಣ್ಣಾರೆ ಕಂಡು ಬೇಸತ್ತು ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ದೇಶದ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಕೈಗೊಂಡ ಮಂಗಳೂರಿನಲ್ಲಿ ಇದೇ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಅಭಿನಂದಿಸಲಾಗುವುದು.
ಈ ಹಿನ್ನೆಲೆಯಲ್ಲಿ ಎರಡು ಪ್ರಮುಖ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನಡೆಯುವ ಅತ್ಯಂತ ಮಹತ್ವದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಜ್ಞಾವಂತ ಜನತೆ, ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸುತ್ತಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ
ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಹಾಗೂ
ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್ ವಿನಂತಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ
ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಜತ್ತಬೈಲ್, ಸಂತ ಮದರ್ ತೆರೇಸಾ ವಿಚಾರ ವೇದಿಕೆ ಖಜಾಂಚಿ ಡೋಲ್ಫಿ ಡಿಸೋಜ,
ಮಾಧ್ಯಮ ಸಮಿತಿ ಸಂಚಾಲಕ
ಸ್ಟಾನಿ ಡಿಕುನ್ನಾ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ
ಉಪಾಧ್ಯಕ್ಷ ಇಲಿಯಾಸ್ ಫರ್ನಾಂಡೀಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು