ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕ ಗಂಭೀರ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
07/09/2025, 13:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnata@gmai.com
ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ
ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಗಳ ಡಿಕ್ಕಿ ನಡುವೆ ಅಪಘಾತ ಸಂಭವಿಸಿದೆ.
ಹಿಂಬದಿಯಿಂದ ಬರ್ತಿದ್ದ ಲಾರಿ ಅಪಘಾತವಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗ್ಯಾಸ್ ಸಿಲಿಂಡರ್ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದಿಂದ ಕೆಲ ಕಾಲ ತಿರುವುಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಸ್ಥಳಕ್ಕೆ ಬಣಕಲ್ ಹಾಗೂ ಬೆಳ್ತಂಗಡಿ ಪೊಲೀಸರ ಭೇಟಿಯಾಗಿ ನೀಡಿದ್ದಾರೆ. ಗಾಯಳುಗಳನ್ನ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದೆ.