ಇತ್ತೀಚಿನ ಸುದ್ದಿ
ಸೆಕ್ಸ್ ವೀಡಿಯೊ ಪ್ರಕರಣ: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್ ರೇವಣ್ಣ; ಇಂದು ಬೆಂಗಳೂರಿಗೆ ಆಗಮನ?
03/05/2024, 11:18

ಬೆಂಗಳೂರು(reporterkarnataka.com):ಜರ್ಮನಿಗೆ ತೆರಳಿದ್ದ ಅಶ್ಲೀಲ ವೀಡಿಯೊ ಪ್ರಕರಣ ಆರೋಪಿ, ಎನ್ ಡಿಎ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ದುಬೈಗೆ ತೆರಳಿದ್ದು, ಇಂದು ಅಥವಾ ನಾಳೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವೀಡಿಯೊ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪ್ರಜ್ವಲ್ ಅವರು ಏ. 26ರಂದು ಚುನಾವಣೆ ಮುಗಿಯುತ್ತಿದ್ದಂತೆ ಏ. 27ರಂದು ಮುಂಜಾನೆ 2.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಜರ್ಮನಿಗೆ ತೆರಳಿದ್ದರು. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದ ಎಸ್ ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಪ್ರಜ್ವಲ್ ವಕೀಲರು ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ ತಂಡದ ಬಳಿ ಮನವಿ ಮಾಡಿದ್ದರು. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಚಾರಣೆಗೆ ಹಾಜರಾಗದಿದ್ದರೆ, ಪ್ರಜ್ವಲ್ ಅವರನ್ನು ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದೀಗ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿ
ದುಬೈಗೆ ಬಂದ ಹಿನ್ನೆಲೆಯಲ್ಲಿ ಅಲ್ಲಿಂದ ಅವರು ನೇರವಾಗಿ ಬೆಂಗಳೂರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.
ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್‌ಪೋರ್ಟ್ ರದ್ದುಪಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.