11:57 AM Wednesday16 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

16/04/2025, 11:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 12.ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಆದಿಕರ್ನಾಟಕ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸುರೇಖಾ (38) ಎಂಬವರು ಏ. 13ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು