5:02 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

SEZ | ಎಸ್‌ಇಝೆಡ್ ಅಧಿಕಾರಿಗಳ ಆದೇಶ ತುಳುನಾಡಿದ ನಂಬಿಕೆಗೆ ಅಪಮಾನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

28/02/2025, 22:56

ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು. ವಿಶೇಷ ಆರ್ಥಿಕ ವಲಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಸುಸೂತ್ರವಾಗಿ ನಡೆಯುಲು ದೈವದೇವರ ಅನುಗ್ರಹವೂ ಅಷ್ಟೇ ಮುಖ್ಯ. ಆದ್ದರಿಂದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಡೆಸಲಿ. ಸಂಸದರು, ಜಿಲ್ಲಾಧಿಕಾರಿಗಳು, ಎಸ್‌ಇಝೆಡ್ ಅಧಿಕಾರಿಗಳು, ಸಂಬಂಧಪಟ್ಟವರು ಕೂಡಲೇ ಒಳ್ಳೆಯ ನಿರ್ಧಾರಕ್ಕೆ ಕೈಗೊಳ್ಳುವಂತೆ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು