8:22 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ

18/10/2021, 20:21

ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್  25ರಂದು ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಿದ್ದು, ಅಕ್ಟೋಬರ್ 20ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ತಾಂತ್ರಿಕ ಸಮಿತಿ ಸಲಹೆ ಮಾಡಿದೆ.

1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್  25ರಿಂದ ಆರಂಭವಾಗಲಿದೆ. ಆದರೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಒಪ್ಪಿಗೆ ಕಡ್ಡಾಯವಾಗಿದೆ. ಹಾಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ತರಗತಿಗೂ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು