12:01 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಶಾಲೆ ನಿರ್ಮಾಣಕ್ಕೆತೋಡಿದ ಇಂಗುಗುಂಡಿಗೆ ಬಿದ್ದು ಬಾಲಕ ಸಾವು: ಗುತ್ತಿಗೆದಾರ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ

06/08/2023, 22:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಾಲೆ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ತೋಡಿದ ಇಂಗು ಗುಂಡಿಯಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.
ಅಶರ್ ಡಿ ಗುನ್ನಾ (8) ಮೃತ ಬಾಲಕ. ಆಟವಾಡುವಾಗ ಇಂಗು ಗುಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.
ಹೊಸದಾಗಿ ನಿರ್ಮಾಣವಾಗುತ್ತಿದ್ದ ಮೊರಾರ್ಜಿ ದೇಸಾಯಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ಇಂಗುಗುಂಡಿ ನಿರ್ಮಾಣ ಮಾಡಲಾಗಿತ್ತು. ನಿಜವಾಗಿ
ಶಾಲೆ ಕಟ್ಟಲು ಟ್ಯಾಂಕ್ ಅಥವಾ ಅಂಡರ್ ಗ್ರೌಂಡ್ ಟ್ಯಾಂಕ್ ನಿರ್ಮಾಣ ಮಾಡಬೇಕಿತ್ತು. ಆದರೆ ತೆರೆದ ಪ್ರದೇಶದಲ್ಲೇ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ದುರಂತ ಸಂಭವಿಸಿದೆ.ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಸ್ಥಳಿಯರ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು