ಇತ್ತೀಚಿನ ಸುದ್ದಿ
ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ
27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.
ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.