7:27 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಸದಸ್ಯರಾಗಿ ಶಬ್ಬೀರ್ ಅಹ್ಮದ್ ಪಾಷಾ ನೇಮಕ

26/05/2025, 21:19

ಶ್ರೀನಿವಾಸಪುರ(reporterkarnataka.com): ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ.
ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಈ ಹಿಂದೆ ಕೋಲಾರ ಜಿಲ್ಲಾ ವಕ್ಫ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದು, ಜೊತೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದಲ್ಲಿ ನಿರ್ದೇಶಕರಾಗಿದ್ದಾರೆ. ಅಲ್ಲದೆ, ಶ್ರೀನಿವಾಸಪುರ ತಾಲ್ಲೂಕು ಭಾರತ ಸೇವಾದಳದ ಉಪಾಧ್ಯಕ್ಷರಾಗಿ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೂಡಾ ಸೇವೆ ನೀಡುತ್ತಿದ್ದಾರೆ.
ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ನೇಮಕವಾದ ಹಿನ್ನೆಲೆಯಲ್ಲಿ ಸಂತೋಷ ವ್ಯಕ್ತಪಡಿಸಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ (ಕೆ.ಎಂ.ಡಿ.ಸಿ) ನಿರ್ದೇಶಕ ಅಬ್ದುಲ್ ಖಯೂಮ್ ಹಾಗೂ ಇತರ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯದ ಹಿತಕ್ಕಾಗಿ ಶ್ರಮಿಸುವ ಸಂಕಲ್ಪವನ್ನು ವ್ಯಕ್ತಪಡಿಸಿರುವ ಅವರು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯದವರೆಗೆ ತಲುಪಿಸಲು ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ. ಇದಲ್ಲದೆ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರತ್ತ ವಿಶೇಷ ಗಮನ ಹರಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು