4:33 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ

05/03/2025, 00:32

ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.
ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದಾಗಿ ಸದನಕ್ಕೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು