11:46 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಕ್ತಿನಗರ ಕ್ಯಾಸ್ಟೊಲಿನೋ ಕಾಲೊನಿ ಬೃಹತ್ ತಡೆಗೋಡೆ ಕುಸಿತ: ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

13/07/2025, 13:12

ಮಂಗಳೂರು(reporterkarnataka.com):ನಗರದಲ್ಲೆಡೆ ಸುರಿದ ಮಳೆಗೆ ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೊನಿ ಬಳಿ ಬೃಹತ್ ತಡೆಗೋಡೆಯೊಂದು ಕುಸಿದಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಡೆಗೋಡೆ ಕುಸಿದ ರಭಸಕ್ಕೆ ಅಲ್ಲಿನ ಕಾಂಕ್ರೀಟ್ ರಸ್ತೆ, ಚರಂಡಿ, ಮ್ಯಾನ್ ಹೋಲ್ ಮತ್ತು ಬಾವಿಗೆ ತೀವ್ರ ಹಾನಿಯಾಗಿದೆ. ಅಲ್ಲದೇ ಸಮೀಪದ ಕೆಲವು ಮನೆಗಳ ಮೆಟ್ಟಿಲುಗಳವರೆಗೂ ತಡೆಗೋಡೆಯ ಅವಶೇಷಗಳು ಬಿದ್ದಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೂಡಲೇ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಲ್ಲಾ ಅವಶೇಷಗಳನ್ನು ತೆರವುಗೊಳಿಸಿ, ಹಾನಿಗೊಳಗಾಗಿರುವ ರಸ್ತೆ, ಚರಂಡಿ ಮೊದಲಾದವುಗಳ ಮರು ನಿರ್ಮಾಣದ ಬಗ್ಗೆ ಕ್ರಮವಹಿಸಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಶೈಲೇಶ್ ಶೆಟ್ಟಿ, ಸ್ಥಳೀಯ ಪ್ರಮುಖರಾದ ವಿನಯ್, ಚನ್ನು, ರಮೇಶ್, ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಮೆಸ್ಕಾಂ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು