1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ದಾರುಣ ಸಾವು

16/11/2022, 20:22

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka@gmail.com): ಮೊಬೈಲ್ ಚಾರ್ಜ್ ಗೆ ಇಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್(34) ಮೃತದುರ್ದೈವಿ. ಇವರು ಸಂಬಂಧಿಕರಾದ  ವಿಫಿನ್  ಹಾಗೂ  ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ  ತಾಲೂಕಿನ ಶಂಕರನಾರಾಯಣ ಗ್ರಾಮಕ್ಕೆ ಬಂದಿದ್ದರು. ಅಲ್ಲಿ ಕೆಲಸ  ಮಾಡಿಕೊಂಡಿದ್ದ ವಸಿಷ್ಠ ಅವರು, ನ.14ರಂದು ರಾತ್ರಿ 8 ಗಂಟೆಗೆ ಅಲ್ಲಿಯೇ ಇದ್ದ  ತೋಟದ  ಪಂಪ್ ಸೆಟ್ ಶೆಡ್‌‌ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದಾರೆ.ಈ ವೇಳೆ  ಆಕಸ್ಮಿಕವಾಗಿ ಕರೆಂಟ್  ಶಾಕ್ ಹೊಡೆದಿದ್ದು, ಕೂಡಲೇ  ಅವರನ್ನು ಕುಂದಾಪುರ  ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತುಆದರೆ,ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ವಸಿಷ್ಠ ಅವರು ಮೃತಪಟ್ಟಿದ್ಧಾರೆ. ಎಂದು ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು