3:01 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ: ದಕ್ಷಿಣ ಕನ್ನಡ ಜಿಲ್ಲೆಯಿಂದ 11 ಮಂದಿ ಗಡಿಪಾರು; ಜಿಲ್ಲಾಧಿಕಾರಿ ಆದೇಶ

11/03/2023, 12:34

ಮಂಗಳೂರು(reporterkarnataka.com): ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ
ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರು ವಿಚಾರಣೆ ಕೈಕೊಂಡು 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಗಡಿಪಾರಿಗೆ ಒಳಗಾದವರು ಯಾರು ಯಾರು?:
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ
ರೋಷನ್, ಪ್ರಸಾದ್, ಉಪ್ಪಿನಂಗಡಿ ಪೊಲೀಸ್‌ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್,ಉಬೈದ್ ಬಿ.ಎಸ್., ತಸ್ಲಿಂ, ಧರ್ಮಸ್ಥಳ
ಪೊಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ. ಗಡೀಪಾರು ಶಿಕ್ಷೆಗೆ ಒಳಗಾದವರು.

ಇತ್ತೀಚಿನ ಸುದ್ದಿ

ಜಾಹೀರಾತು