12:14 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್

21/02/2022, 12:44

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರೆ, ದುಷ್ಕರ್ಮಿಗಳ ಹೃದಯದಲ್ಲಿ ನಡುಕ ಉಂಟು ಮಾಡಿದರು.

ಪೊಲೀಸರಿಂದ ಪಥ ಸಂಚಲನ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್ ಆಯುಕ್ತರ ಕಚೇರಿ ಬಳಿ ಕೊನೆಗೊಂಡಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಡಿಸಿಪಿ ಹರಿರಾಂ ಶಂಕರ್, ಟ್ರಾಫಿಕ್ ಎಸಿಪಿ ನಟರಾಜ್ ಸಹಿತ ಹಲವು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡರು.

ಪಥ ಸಂಚಲನದಿಂದ ನಗರದ ಬಹುತೇಕ ಕಡೆಗಳಲ್ಲಿ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡ ಮಾಡಲಾಗಿತ್ತು.


ಕಳೆದ ಕೆಲವು ದಿನಗಳಿಂದ ಕೆಲವು ವಿಷಯಗಳು ಗೊಂದಲ ಮೂಡಿಸುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ಜನತೆಯಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಶಾಲಾ ಕಾಲೇಜುಗಳು ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ ಎಂದು ಪೊಲೀಸ್  ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು