3:19 PM Friday30 - October 2026
ಬ್ರೇಕಿಂಗ್ ನ್ಯೂಸ್
ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ

ಇತ್ತೀಚಿನ ಸುದ್ದಿ

ಹಾಲಿನ ದರದಲ್ಲಿ ಭಾರೀ ಏರಿಕೆ: ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ-ತಿನಿಸುಗಳ ಬೆಲೆ ಹೆಚ್ಚಳ?

30/10/2026, 15:14

ಬೆಂಗಳೂರು(reporterkarnataka.com): ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ ₹8ರಷ್ಟು ಏಕಾಏಕಿ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಬೆಲೆ ಏರಿಕೆಯನ್ನು ₹2ರಿಂದ ₹3ಕ್ಕೆ ಸೀಮಿತಗೊಳಿಸಿದರೆ ಹೋಟೆಲ್‌ಗಳಲ್ಲಿ ಕಾಫಿ, ಟೀ ಹಾಗೂ ತಿಂಡಿ-ತಿನಿಸುಗಳ ಬೆಲೆ ಹೆಚ್ಚಿಸುವ ಅಗತ್ಯವಿರುವುದಿಲ್ಲ ಎಂದು ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.
ಹಾಲಿನ ದರವನ್ನು ಈ ಪ್ರಮಾಣದಲ್ಲಿ ಹೆಚ್ಚಿಸುವುದರಿಂದ ಕಾಫಿ, ಟೀ ಸೇರಿದಂತೆ ಹಾಲಿನಿಂದ ತಯಾರಿಸುವ ಎಲ್ಲ ಆಹಾರ ಮತ್ತು ಪಾನೀಯಗಳ ಬೆಲೆ ಹೆಚ್ಚಿಸುವುದು ಅನಿವಾರ್ಯವಾಗಲಿದೆ. ಇದರಿಂದ ಪೌಷ್ಟಿಕ ಆಹಾರವಾಗಿ ಹಾಲನ್ನು ಅವಲಂಬಿಸಿರುವ ಜನಸಾಮಾನ್ಯರು, ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಮಕ್ಕಳಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನಮ್ಮ ಹೆಮ್ಮೆಯ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮೂಲಕ ಜನರು ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲು ಸರ್ಕಾರ ಪ್ರೋತ್ಸಾಹಿಸಬೇಕು. ಡೈರಿ ಉದ್ಯಮದ ಆಡಳಿತಾತ್ಮಕ ವೆಚ್ಚವನ್ನು ಹತೋಟಿಗೆ ತರುವುದರ ಜೊತೆಗೆ ರೈತರಿಗೆ ಸೂಕ್ತ ಪ್ರೋತ್ಸಾಹ ಧನ ನೀಡುವ ಮೂಲಕ ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡುವ ಮುನ್ನ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅಕ್ಕಿಯ ಬೆಲೆಯೂ ನಿರಂತರವಾಗಿ ಏರಿಕೆಯಾಗುತ್ತಿದೆ. ಹಾಲು ಮತ್ತು ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಹೋಟೆಲ್ ಉದ್ಯಮದ ಮೇಲೆಯೂ ಒತ್ತಡ ಹೆಚ್ಚಾಗಿದೆ. ಈ ಪರಿಸ್ಥಿತಿಯಲ್ಲಿ ಕಾಫಿ, ಟೀ ಹಾಗೂ ತಿಂಡಿ-ತಿನಿಸುಗಳ ಬೆಲೆ ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಬೆಂಗಳೂರು ಹೋಟೆಲುಗಳ ಸಂಘ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು