5:23 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶಾರ್ಪ್ ಶೂಟರ್ ಮಂಜೇಶ್ವರದ ಅಲಿ ಮುನ್ನಾ ಬಂಧನ: ರವಿ ಪೂಜಾರಿ ಸಹಚರ

24/10/2023, 13:29

ಮಂಗಳೂರು(reporterkarnataka.com): ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಸಮೀಪದ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ಹನೀಫ್ ಯಾನೆ ಅಲಿ ಮುನ್ನ ಭೂಗತ ಪಾತಕಿ ರವಿಪೂಜಾರಿಯ ಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿದ್ದು,2010 ಮತ್ತು 2013 ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಸಿಲ್ಕ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿ ಜೀವಿಸುತ್ತಿದ್ದ.ಈಗಲೂ ಹತ್ತಾ ವಸೂಲಿಯಲ್ಲಿ ತೊಡಗಿಸಿಕೊಂಡಿದ್ದ ಅಲಿ ಮುನ್ನನನ್ನ ಎಸಿಪಿ ಧನ್ಯ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು