9:02 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಬಂಧನ: ವಾಹನ ವಶ

15/10/2022, 15:03

ಮಂಗಳೂರು(reporterkarnataka.com): ಫರಂಗಿಪೇಟೆ ಸಮೀಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಫರಿನ ರಿಯಾಜ್ (38) ಎಂದು ಗುರುತಿಸಲಾಗಿದೆ.
ಕೇರಳ ನೋಂದಾವಣಿಯ ಸ್ಕೋರ್ಪಿಯೋ ವಾಹನ ಕೂಡ ವಶಕ್ಕೆ ಪಡೆದಿದ್ದಾರೆ. ದೂರುದಾರರು ಕೂಡ ವಾಹನ ಮತ್ತು ಆರೋಪಿಯನ್ನು ಗುರುತಿಸಿದ್ದು, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಮತ್ತು ಯಾವುದೇ ಪ್ರಕರಣಗಳು ಹಿಂದೆ ದಾಖಲಾಗಿಲ್ಲ ಜೊತೆಗೆ ಯಾವುದೇ ಮಾರಕಾಸ್ತ್ರ ಸಿಕ್ಕಿಲ್ಲ ಎಂದು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಓವರ್ ಟೇಕ್ ವಿಚಾರದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ಅಡ್ಡಗಟ್ಟಿ, ತಲ್ವಾರ್ ಝಳಪಿಸಿದ್ದು, ಇದು ಕೊಲೆ ಯತ್ನ ಅಲ್ಲ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ತಮಗೆ ನೀಡಿದ್ದ ಗನ್ ಮ್ಯಾನ್‌ನನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ದ.ಕ. ಜಿಲ್ಲಾ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು