6:59 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು