4:55 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು