3:13 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಶಾಸಕ ಕಾಮತ್ ನೇತೃತ್ವದ ನಿಯೋಗ ಕಾರ್ಮಿಕ ಸಚಿವರ ಭೇಟಿ: ಟೈಲರ್ ಗಳಿಗೆ ಭವಿಷ್ಯ ನಿಧಿ ಜಾರಿಗೊಳಿಸಲು ಮನವಿ

24/09/2021, 18:47

ಮಂಗಳೂರು(reporterkarnataka.com): ಕರ್ನಾಟಕ ಟೈಲರಿಂಗ್ ಅಸೋಸಿಯೇಶನ್ ನಿಯೋಗವು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. 

ಬಟ್ಟೆ ಹೊಲಿದು ಜೀವನ ಸಾಗಿಸುತ್ತಿರುವ ಟೈಲರಿಂಗ್ ನೌಕರರಿಗೆ ಭವಿಷ್ಯ‌ ಪಿಂಚಣಿ ನಿಧಿ ಜಾರಿಗೊಳಿಸುವ ಕುರಿತು ಟೈಲರಿಂಗ್ ಅಸೋಸಿಯೇಶನ್ ಬೇಡಿಕೆಯಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಇತರ ಬೇಡಿಕೆಗಳ ಕುರಿತು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ನಡೆಯಿತು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಟೈಲರಿಂಗ್ ಅಸೋಶಿಯೇಶನ್ ರಾಜ್ಯಾಧ್ಯಕ್ಷ ಕೆ.ಎಸ್. ಆನಂದ, ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಬಿ., ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು