ಇತ್ತೀಚಿನ ಸುದ್ದಿ
ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ
01/10/2022, 00:03
ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.
ವಿಷಯ ಪ್ರಸ್ತಾಪಿಸಿದ ಗಿರೀಶ್ ಅಂಚನ್, ವಿಪಕ್ಷ ನಾಯಕ ರಮೇಶ್ ಕಾಂಚನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಘುಪತಿ ಭಟ್ ವಿರುದ್ಧ ಶೇ.40ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿದೆ. ಇದು ಸತ್ಯ ವಿಚಾರವಲ್ಲ. ನಮ್ಮಲ್ಲಿ ಯಾರು ಕಮಿಷನ್ ಪಡೆದುಕೊಳುವುದಿಲ್ಲ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕಾಂಚನ್, ಪ್ರತಿಭಟನೆ ನಡೆಸುವುದು ಪ್ರತಿಪಕ್ಷದಲ್ಲಿರುವ ನಮ್ಮ ಹಕ್ಕು. ಇಂತಹ ಸಂದರ್ಭದಲ್ಲಿ ರಾಜಕೀಯ ಆರೋಪ ಮಾಡುವುದು ಸಾಮಾನ್ಯ ಎಂದು ತಿಳಿಸಿದರು. ರಘುಪತಿ ಭಟ್ ಮಾತನಾಡಿ, ನಮ್ಮ ಮೇಲೆ ಆರೋಪ ಮಾಡಿದರೆ ಅವರ ಯೋಗ್ಯತೆ ಅಳೆಯುತ್ತದೆ. ಜಿಲ್ಲೆ ಯಲ್ಲಿ ಯಾವುದೇ ಪಕ್ಷದ ಜನಪ್ರತಿನಿಧಿಗಳು ಕೂಡ ಶೇ.೪೦ ಕಮಿಷನ್ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.