1:01 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ

14/10/2022, 10:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲ್ಲೆಗೆ ಒಳಗಾಗಿರುವ ಬಂದೇನಮಾಜ ಮುಲ್ಲಾ ಹಾಗೂ ಅವರ ಸಂಬಂಧಿಕರು ಆರೋಪ ಮಾಡಿದ್ದಾರೆ.


ಬಂದೇನಮಾಜ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಬರುತ್ತಿರುವಾಗ ಕಾಗವಾಡ ಶಾಸಕ ಶ್ರಿಮಂತ ಪಾಟೀಲ ಅವರ ಆಪ್ತ, ಗ್ರಾ ಪಂ ಸದಸ್ಯ ಶಂಕರಗೌಡ ಪಾಟೀಲ್, ಸಂಗಡಿರಾದ ರಾಘವೇಂದ್ರ ಸಪ್ತಸಾಗರ್, ಗಂಗಪ್ಪ ಮಾಳಿ, ಬುಜುಗೌಡ ಪಾಟೀಲ್ ಎಂಬುವರು ಬಂದೇನಮಾಜ್ ಮುಲ್ಲಾ ಎಂಬುವರ ಮೇಲೆ ಮಧ್ಯದ ಅಮಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮಾರನೆಯ ದಿನ 7ನೇ ತಾರೀಕು ನಾಲ್ವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ದೂರು ದಾಖಲಾಗಿದ್ದರು ಅಥಣಿ ಪೊಲೀಸರು ಆರೋಪಿಗಳ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆಯಾಗಿ ಒಂದು ವಾರ ಕಳೆದರೂ FIR ಪ್ರತಿ ನೀಡುತ್ತಿಲ್ಲ ಹಾಗೂ ಅಥಣಿ ಪೊಲೀಸರು ರಾಜಕೀಯ ವ್ಯಕ್ತಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಅಥಣಿ ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ಪದೇ ಪದೇ ಪೊಲೀಸ್ ಠಾಣೆಗೆ ನ್ಯಾಯ ಕೊಡಿಸುವಂತೆ ಹೋಗುತ್ತಿದ್ದಂತೆ ಶಾಸಕ ಶ್ರೀಮಂತ ಪಾಟೀಲ್ ಆಪ್ತ ಸಲಹೆಗಾರ ರಾಜು ಮಾನೆ ಎಂಬುವರು ದೂರು ವಾಪಸ್ ತೆಗೆದುಕೋ ಇಲ್ಲವಾದರೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಹಾಗೂ ಗುಂಡಾ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾದರೆ, ಕೆಲವರು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಗ್ರಾಮದಲ್ಲಿ ಮೆರೆಯುತ್ತಿದ್ದಾರೆ ಶಾಸಕರು ಇಂಥವರಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತರು ಆಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು