2:47 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

26/02/2024, 16:46

ಬೆಂಗಳೂರು(reporterkarnataka.com): ಸುರಪುರ‌ದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಶಾಸಕರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಜನಾನುರಾಗಿ ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು.ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಅವರು ಕಟ್ಟಾ ಕಾಂಗ್ರೆಸ್‌ ನಾಯಕನಾಗಿಯೇ ಮುಂದುವರಿದಿದ್ದರು. ಕೆಲವು ದಿನದ ಹಿಂದಷ್ಟೇ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.ನಾಲ್ಕು ಬಾರಿ ಸುರಪುರ ಕ್ಷೇತ್ರ ಪ್ರತಿ‌ನಿಧಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಸದಾ ಸಾಮಾಜಿಕ ಬದ್ದತೆ ಹೊಂದಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು