5:37 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ‌ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

25/04/2023, 15:04

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕಳವು ಮಾಡಲಾಗಿದೆ. ಇಡಿ, ಐಟಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಕಳವು ಮಾಡುವ ಕೆಲಸ ನಡೆಯುತ್ತಿದೆ.
ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನ ಆತಂಕದಲ್ಲಿರುವ ಸಂದರ್ಭದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮಹತ್ವದ್ದು. ರಾಜ್ಯದಲ್ಲಿ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಪಡೆಯುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದು, ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ ಎಂದರು.
ಬಿಜೆಪಿ ಎಲ್ಲಾ ಕಡೆ ಎಟಿಎಂ ಮಷಿನ್ ಇಟ್ಟಿದ್ದಾರೆ. ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಮನಿ ಮತ್ತು ಮಸಲ್ ಪವರ್ ಬಳಕೆ ಮಾಡುತ್ತಿದ್ದಾರೆ. ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಹೂಡಿಕೆ, ಹಣದುಬ್ಬರ, ಭ್ರಷ್ಟಾಚಾರದ ಬಗ್ಗೆ ದೇಶದ ಪ್ರಧಾನಿ ಅವರು ಮಾತನಾಡುತ್ತಿಲ್ಲ. ಬೆಂಗಳೂರಿನಿಂದ ವಾರಣಾಸಿಗೆ ಮೊನ್ನೆ ಒಂದು ರೈಲು ಬಿಟ್ಟು ಅದನ್ನು ದೊಡ್ಡ ಸುದ್ದಿ ಮಾಡಿದ್ದಾರೆ. ನಾನು ರೈಲ್ವೆ ಸಚಿವ ಆಗಿದ್ದಾಗ 30 ಕ್ಕೂ ಅಧಿಕ ರೈಲು ಹಾಕಿದ್ದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು185 ವಿಧಾನಸಭಾ ಕ್ಷೇತ್ರಗಳಿಗೆ ಬೇರೆ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಕೆಲ ಕಡೆಗಳಲ್ಲಿ ನಾಯಕರ, ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿದ್ದರಿಂದ ಪಟ್ಟಿ ಬಿಡುಗಡೆ ವಿಳಂಬ ಆಯಿತು ಎಂದರು.


ಪಕ್ಷದ ಟಿಕೆಟ್ ಸಿಗದೇ ಇದ್ದವರೂ ಹತಾಶೆಯಿಂದ ಬೇರೆ ಬೇರೆ ರೀತಿಯಲ್ಲಿ ಆರೋಪ ಮಾಡ್ತಾರೆ ಅದಕ್ಕೆಲ್ಲಾ ಈಗ ಸಮಾಜಿಯಿಸಿ ಕೊಡಲ್ಲ. ನಮ್ಮ ಗುರಿ ಚುನಾವಣೆ ಆಗಿದೆ. ಮೊದಲ ಆದ್ಯತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದಾಗಿದೆ. ಎಲ್ಲರೂ ಒಗ್ಗಟ್ಟಾಗಿ ಈ ಚುನಾವಣೆ ಎದುರಿಸುತ್ತೇವೆ ಎಂದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ವಕ್ತಾರ ಡಾ.ಶಮಾ ಮುಹಮ್ಮದ್, ಪ್ರಣವ್ ಜ್ಹಾ, ಶಾಸಕ, ಚರಣ್ ಸಿಂಗ್ ಸಪ್ರಾ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು