4:24 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಪ್ರತಿ ವಾರ ನಡೆಯಲಿ: ಸ್ಪೀಕರ್ ಕಾಗೇರಿ

27/08/2021, 21:04

ಮಂಗಳೂರು (reporterkarnataka.com): ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದರು.

ಅವರು ನಗರದ ಸರ್ಕಿಟ್ ಹೌಸ್‍ನಲ್ಲಿ ಆಗಸ್ಟ್ 27ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಮಂಜೂರಾತಿ ಹಾಗೂ ಅವುಗಳ ಪ್ರಗತಿ ಪರಿಶೀಲನೆ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಶಾಸಕರಿಗೆ ಅವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ದಿಗಾಗಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲು 2 ಕೋಟಿ ರೂ.ಗಳ ಅನುದಾನ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅತಿಯಾದ ಕಾರ್ಯಬಾಹುಳ್ಯದ ಕಾರಣ ಈ ಕಾಮಗಾರಿಗಳ ಮೇಲ್ವಿಚಾರಣೆಯನ್ನು ಕಳೆದ ವರ್ಷದಿಂದ ಸಹಾಯಕ ಆಯುಕ್ತರಿಗೆ ವಹಿಸಲಾಯಿತು. ಆದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗುತ್ತಿಲ್ಲ. ಹಾಗಾಗಿ ತಳಮಟ್ಟದಿಂದ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಕಾಮಗಾರಿಗಳು ವಿಳಂಬವಾಗಬಾರದು. ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಅನುಷ್ಠಾನ ಗಂಭೀರ ವಿಷಯವಾಗಿದ್ದು, ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮವಹಿಸಬೇಕು ಎಂದರು.

ಒಂದೇ ಏಜೆನ್ಸಿಯ ಬದಲು ಹಲವು ಏಜನ್ಸಿಗಳ ಮೂಲಕ ನಿರ್ವಹಿಸುವುದು ಉತ್ತಮ. ಕಾಮಗಾರಿ ಪೂರ್ಣಗೊಂಡ ನಂತರ ಮೂರನೇ ವ್ಯಕ್ತಿ ತಪಾಸಣೆ ಅತೀ ಶೀಘ್ರವಾಗಿ ಆಗಬೇಕು. ನಿರ್ವಹಿಸಲಾದ ಕಾಮಗಾರಿಗಳು, ಅದಕ್ಕೆ ಬಿಡುಗಡೆಯಾದ ವೆಚ್ಚ, ಭರಿಸಲಾದ ಮೊತ್ತದ ವಿವರವನ್ನು ಕಾಲಕಾಲಕ್ಕೆ ಸಾಫ್ಟ್ ವೇರ್‍ನಲ್ಲಿ ಅಪ್‍ಡೇಟ್ ಮಾಡಬೇಕು. ನಿರ್ವಹಿಸುವ ಏಜೆನ್ಸಿಗಳು ಚಟುವಟಿಕೆಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಮೂಲಕ ನಿರ್ವಹಿಸಲಾಗುತ್ತಿರುವ ಕಾಮಗಾರಿಗಳಲ್ಲಿ ಅಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳು ವಹಿಸುತ್ತಿರುವ ಕ್ರಮಗಳನ್ನು ಸಹಾಯಕ ಆಯುಕ್ತರು ನೇರವಾಗಿಯೇ ಮೇಲ್ವಿಚಾರಣೆ ಮಾಡಬಹುದಾಗಿದೆ, ಕಾಮಗಾರಿಗಳನ್ನು ಎಂಟ್ರಿ ಮಾಡುವ ಸಾಫ್ಟ್ ವೇರ್‍ನಲ್ಲಿ ಸಮಸ್ಯೆ ಎದುರಾದಲ್ಲಿ ಕೂಡಲೇ ಗಮನಕ್ಕೆ ತರಬೇಕು. ಸಹಾಯಕ ಆಯುಕ್ತರುಗಳು ಉತ್ಸಾಹದಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದು ತಿಳಿಸಿದರು. ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಲು ಎಲ್ಲ ಶಾಸಕರು ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜವಾಬ್ದಾರರಾಗಿರುತ್ತಾರೆ, ರಾಜ್ಯದಲ್ಲಿ ಅಂದಾಜು ಒಂದು ಸಾವಿರ ಕೋಟಿ ರೂ.ಗಳು ಈ ರೀತಿಯ ಕಾಮಗಾರಿಗಳಿಂದಾಗಿ ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಪಿಡಿ ಖಾತೆಗಳಲ್ಲಿವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು