1:06 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ ಸ್ಥಿರ; ವೈದ್ಯರಿಂದ ಮಾಹಿತಿ

25/12/2024, 16:56

ಬೆಂಗಳೂರು(reporterkarnataka.com): ಅಮೇರಿಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿ
ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ.
ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು