2:33 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಶತಮಾನೋತ್ಸವದ ವೈಭವದಲ್ಲಿ ಬಿಜೈ ಕಾಪಿಕಾಡು ಸರಕಾರಿ ಶಾಲೆ: ಫೆಬ್ರವರಿ ಮೊದಲ ವಾರದಲ್ಲಿ ಸಂಭ್ರಮಾಚರಣೆ

07/01/2022, 21:17

ಮಂಗಳೂರು(reporterkarnataka.com) : ಕಳೆದ 100 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ನಗರದ

ಬಿಜೈ ಕಾಪಿಕಾಡು ಸರಕಾರಿ ಶಾಲೆಯು ಶತಮಾನದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇದೇ ಬರುವ 2022ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದ ನೂತನ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ  ವೇಳೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಪಾಠ ಕಲಿಸಿದ ನಿವೃತ್ತ ಶಿಕ್ಷಕ ಶಿಕ್ಷಕಿಯರನ್ನು ಹಾಗೂ ಪ್ರಸ್ತುತ ಇರುವ ಶಿಕ್ಷಕಿಯರನ್ನು ಗೌರವಿಸಲಾಗುವುದು.

ಶಾಲೆಗೆ ಕೊಡುಗೆಗಳನ್ನು ನೀಡಿದವರನ್ನು ಸನ್ಮಾನಿಸಲಾಗುವುದು. ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ  ಹಿರಿಯ ಕಿರಿಯ ಹಳೆ ವಿದ್ಯಾರ್ಥಿಗಳೊಂದಿಗೆ ಸಹ ಭೋಜನ ಏರ್ಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಶಾಶ್ವತ ನಿಧಿಯೊಂದನ್ನು ಸ್ಥಾಪಿಸಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮತ್ತು ಹೆಚ್ಚಿನ ಶಿಕ್ಷಕರನ್ನು ನೇಮಕಾತಿ ಮಾಡಲು ಸಮಿತಿಯಲ್ಲಿ ನಿರ್ಣಯಿಸಲಾಗಿದೆ.  ಇದಕ್ಕಾಗಿ  ದೇಣಿಗೆಯನ್ನು ಚೆಕ್ ಅಥವಾ ಡಿ.ಡಿ. ಮೂಲಕ  ಸಂಗ್ರಹಿಸಲಾಗುವುದು. ದೇಣಿಗೆಯನ್ನು ನೀಡಲು ಇಚ್ಚೆ ಇರುವವರು ಚೆಕ್ ಅಥವಾ ಡಿ.ಡಿ. ಮೂಲಕ ನೀಡಲು ಕೋರಲಾಗಿದೆ. ಅಥವಾ ಕಾಪಿಕಾಡು ಶಾಲೆಗೆ ಬಂದು ಮುಖ್ಯೋಪಾಧ್ಯಾಯನಿಯರಲ್ಲಿ ನೀಡಿ ರಸೀತಿ ಪಡೆದುಕೊಳ್ಳಬಹುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

“Centenary Committee, Govt. Hr. Pry. School, Kapikad”

Bank Details:

Name of the Bank : Canara Bank

Branch: Kuntikana Branch, Mangalore

A/c No: 110022341481

IFSC Code: CNRB0000178

ಇತ್ತೀಚಿನ ಸುದ್ದಿ

ಜಾಹೀರಾತು