2:51 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಶಿಡ್ಲಘಟ್ಟ | ರಾಸುಗಳನ್ನು ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ: ರೈತರು-ಪೊಲೀಸರ ಜಟಾಪಟಿ

29/04/2026, 18:12

ಶಿಡ್ಲಘಟ್ಟ(reporterkarnataka.com):ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ.
ಬುಧವಾರ ಜಿಲ್ಲಾಡಳಿತ ಭವನಕ್ಕೆ ರಾಸುಗಳನ್ನು ನುಗ್ಗಿಸಲು ರೈತರು ಮುಂದಾದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ಜಟಾಪಟಿ ನಡೆಯಿತು.
ರೈತ ಭರತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಬ್ಯಾರಿಕೇಡ್ ಕಿತ್ತು ಎಸೆದು ಜಿಲ್ಲಾಡಳಿತ ಭವನ ಪ್ರವೇಶಿಸಲು ರೈತರು ಮುಂದಾದರು.
ಭವನದ ಮುಂಭಾಗದ ಗೇಟ್ ಮುಚ್ಚಲಾಯಿತು. ಜಿಲ್ಲಾಡಳಿತ ಭವನದೊಳಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ‌.ಸುಧಾಕರ್ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಅವರು ಸಭೆಗೆ ಬರುವ ಸಮಯದಲ್ಲಿಯೇ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿವೆ.
ಎಸ್ಪಿ, ಎಎಸ್ ಪಿ, ಡಿವೈಎಸ್ ಪಿ ಸೇರಿದಂತೆ ಅಪಾರ ಸಂಖ್ಯೆಯ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
45 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಕೆಡಿಪಿ ಸಭೆ ನಡೆಸಿ ಸಚಿವರು ಹೊರ ಬರುವುದನ್ನು ರೈತರು ಕಾಯುತ್ತಿದ್ದು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು