ಇತ್ತೀಚಿನ ಸುದ್ದಿ
ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ
06/02/2026, 21:22
ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್ಐ ಎಚ್.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.













