8:31 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶಿಕಾರಿಪುರ ಬಳಿ ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ವ್ಯಕ್ತಿ ದುರ್ಮರಣ

23/09/2024, 22:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಬಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ
ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಶಿಕಾರಿಪುರದಲ್ಲಿ
ಇಂದು ಸಂಜೆ ನಡೆದಿದೆ.
ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 )ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ
ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ ಬದಲಾವಣೆ ಮಾಡುತ್ತಿರುವಾಗ ಶಿಕಾರಿಪುರದಿಂದ ಹೊನ್ನಳ್ಳಿ ಹೋಗುವ KA 01 EB 4020 ಸಂಖ್ಯೆಯ ಬಜಾಜ್ ಸಿಟಿ 100 ಬೈಕ್ ಸವಾರ ಬಸವರಾಜ್ ಗುದ್ದಿದ ಪರಿಣಾಮವಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ತೀರ್ಥಹಳ್ಳಿಯಿಂದ ಕೆಲಸದ ಮೇಲೆ KA 14 B 0842 ಸಂಖ್ಯೆಯ ಲಾರಿಯನ್ನು ತೆಗೆದುಕೊಂಡು ರಮೇಶ್ ಶಿಕಾರಿಪುರಕ್ಕೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು