12:20 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು