8:43 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ: ಜಯಾನಂದ ಪೆರಾಜೆ

04/01/2024, 22:58

ಬಂಟ್ವಾಳ(reporterkarnataka.com): ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.
ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ, ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.


ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ , ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು