8:45 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ:ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?

02/06/2022, 10:36

ತುಮಕೂರು(reporterkarnataka.com):-ಪಠ್ಯಪುಸ್ತಕ ಪರಿಷ್ಕರಣೆ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿದ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ತುಮಕೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಈಗಾಗಲೇ ಪೊಲೀಸರು ೧೫ ಮಂದಿಯನ್ನು ೨ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕೃತ್ಯವನ್ನು ಖಂಡಿಸುತ್ತೇನೆ. ಇದಕ್ಕೆ ತಕ್ಕಪಾಠ ಕಲಿಬೇಕಾಗುತ್ತದೆ. ಮನೆಗೆ ನುಗ್ಗುತ್ತೇನೆ ಹೆದರಿಸುತ್ತೇನೆ ಎಂಬುದು ನಡೆಯುವುದಿಲ್ಲ . ಪಠ್ಯ ಪರಿಷ್ಕರಣೆ ವಿಚಾರಕ್ಕೆ ಈ ಘಟನೆ ನಡೆದಿದೆಯೋ ಎಂಬುದರ ಮಾಹಿತಿಯಿಲ್ಲ. ಬೆಂಗಳೂರು ೫ ದಾವಣಗೆರೆ ತುಮಕೂರು , ಚಿಕ್ಕಮಂಗಳೂರು ಕಡೆಗಳಿಂದ ಇವರುಗಳು ಬಂದಿದ್ದಾರೆ. ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಹಕ್ಕಿದೆ ಆದರೆ ಮನೆಗೆ ನುಗ್ಗಿ ಗಲಬೆ ಸೃಷ್ಟಿ ಮಾಡುವುದು ಸರಿಯಲ್ಲ. ತಿಪಟೂರಿನಲ್ಲಿ ಎಲ್ಲ ಪಕ್ಷದವರು ಸೌರ್ಹಾಧತೆಯಿಂದ ಇದ್ದಾರೆ ಎಂದರು. ಈ ಘಟನೆ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಅವರ ಪಿಎ ಹಾಗೂ ಮಗ ಇದ್ದರು. ಏಕಾಏಕಿ ಈ ಘಟನೆ ನಡಸಿರುವುದು ಖಂಡನೀಯ ಎಂದು ತಿಳಿಸಿದರು. ತಿಪಟೂರಿನಲ್ಲಿ ಎಲ್ಲರೂ ಸೌಹಾರ್ದ ವಾಗಿ ಇದ್ದೇವೆ. ಆ ಕಾರಣಕ್ಕೆ ಸೆಕ್ಯೂರಿಟಿ ನೀಡಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು