ಇತ್ತೀಚಿನ ಸುದ್ದಿ
ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಕೊಡುಗೆ ಮಹತ್ವದ್ದು: ಜಿ.ಕೆ. ಭಟ್
13/05/2022, 07:41
ಮಂಗಳೂರು(reporterkarnataka.com): ಶಿಕ್ಷಣ ಸಂಸ್ಥೆಗಳೊಂದಿಗೆ ಹಳೆ ವಿದ್ಯಾರ್ಥಿಗಳು ನಿಕಟ ಸಂಪರ್ಕದಲ್ಲಿದ್ದು ಸಂಸ್ಥಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮಿಂದಾದ ಸಹಕಾರ ನೀಡಿದಲ್ಲಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ ಎಂದು ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹೇಳಿದರು.
ಅವರು ಇತ್ತೀಚೆಗೆ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಆಯೋಜಿಸಿದ್ದ “ಬೆಸೆಂಟ್ ಡೊಂಜಿ ದಿನ” ಎಂಬ ವಿದ್ಯಾರ್ಥಿ ಜೀವನದ ಹಳೆಯ ನೆನಪುಗಳನ್ನು ಮೆಲುಕುಹಾಕುವ ವಿನೂತನ ಕರ‍್ಯಕ್ರಮದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳಿಗೆ ಹಳೆ ವಿದ್ಯಾರ್ಥಿಗಳು ಆಧಾರ ಸ್ತಂಭಗಳು, ಸಂಸ್ಥೆಗಳ ಏಳಿಗೆಗೆ ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಬೇಕು ಎಂದರು.
ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿನೂತನ ಕರ‍್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಇನ್ನೋರ್ವ ಅತಿಥಿ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀನಾರಾಯಣ ಭಟ್ ಅವರು ಮಾತನಾಡಿ ಹಳೆ ವಿದ್ಯಾರ್ಥಿಗಳ ವಿನೂತನ ಕಾರ‍್ಯಕ್ರಮವನ್ನು ಶ್ಲಾಘಿಸಿ ಶುಭಕೋರಿದರು.
ವಿವಿಧ ರೀತಿಯ ಆಟೋಟಗಳನ್ನು ಆಯೋಜಿಸಲಾಗಿತ್ತು. ಸುಮಾರು 100ಕ್ಕಿಂತ ಹೆಚ್ಚು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರ ಗಣಪತಿ ಭಟ್, ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ‍್ಯದರ್ಶಿ ರಾಜೇಶ್ ಮೂದಲಿಯಾರ್ ಉಪಸ್ಥಿತರಿದ್ದರು.
ಪದ್ಮಜಾ ಪ್ರಾರ್ಥನೆಗೈದರು. ಸಂಘದ ಮಾಜಿ ಅಧ್ಯಕ್ಷ. ಪ್ರದೀಪ್ ಕಾರ‍್ಯಕ್ರಮ ನಿರೂಪಿಸಿ ವಂದಿಸಿದರು.
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಡಾ. ವಾಸಪ್ಪ ಗೌಡ ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಹಳೆ ವಿದ್ಯಾರ್ಥಿಗಳ ಈ ವಿನೂತನ ಕರ‍್ಯಕ್ರಮವನ್ನು ಶ್ಲಾಘಿಸಿದರು ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಅಭಿನಂದಿಸಿದರು.
ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಲ್ತೇಶ್ ಮೊಗವೀರ್ ಉಪಸ್ಥಿತರಿದ್ದರು. ಕ್ರೀಡಾ ಕರ‍್ಯದರ್ಶಿ ಪ್ರಣವ್ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ಆದಿತ್ಯ ಶೆಟ್ಟಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.