3:00 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ: ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವಸತಿ ಸಚಿವ ಜಮೀರ್ ಅಹಮದ್

05/09/2023, 19:45

ಮಂಗಳೂರು(reporterkarnataka.com) : ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದಲೇ ಭವಿಷ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯಪಟ್ಟರು.
ಕಣಚೂರು ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತಾನಾಡಿದ ಅವರು, ಶಿಕ್ಷಣ ಇಲ್ಲದಿದ್ದರೆ ಶೂನ್ಯ. ರಾಜಕೀಯ ಅಧಿಕಾರ ಸಿಗಬಹುದು. ಆದರೆ ಶಿಕ್ಷಣ ಇಲ್ಲದಿದ್ದರೆ ಏನೂ ಸಾಧಿಸಲಾಗದು ಎಂದು ಅವರು ನುಡಿದರು.


ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕೆಎಂಡಿಸಿ ಹಾಗೂ ಅಲ್ಪಸಂಖ್ಯಾತ ನಿರ್ದೇಶನಾಲಯದ ವತಿಯಿಂದ ಎಂಬಿಬಿಸ್, ಎಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಕ್ಕೆ ಸಾಕಷ್ಟು ನೆರವು ದೊರೆಯುತ್ತಿದೆ. ವೈದ್ಯಕೀಯ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ 5 ಲಕ್ಷ ರೂ. ಗೆ ಹೆಚ್ಚಿಸಲು, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 20 ರಿಂದ 30 ಲಕ್ಷ ರೂ. ವರೆಗೆ ಹೆಚ್ಚಿಸಲು ತೀರ್ಮಾನ ಮಾಡಿದ್ದೇವೆ. ಇದರ ಅನುಕೂಲ ಪಡೆಯಬೇಕು ಎಂದು ಹೇಳಿದರು.
ಕಣಚೂರು ವಿದ್ಯಾಸಂಸ್ಥೆ ಯಲ್ಲಿ 2018 ರಲ್ಲಿ 7 ಸಾವಿರ ಮಕ್ಕಳು ಪ್ರವೇಶ ಪಡೆದಿದ್ದು, ಈಗ ಅದರ ಸಂಖ್ಯೆ 10 ಸಾವಿರಕ್ಕೆ ಏರಿದೆ. ಇದು ಸಂಸ್ಥೆಯು ಗುಣಮಟ್ಟ ಶಿಕ್ಷಣ ನೀಡುತ್ತಿರುವುದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದರು.
ಪೌರಾಡಳಿತ ಸಚಿವ ರಹೀಮ್ ಖಾನ್, ಮಾತನಾಡಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಶಿಕ್ಷಣ ಕ್ಕೆ ಹೆಚ್ಚು ಒತ್ತು ಕೊಟ್ಟು ಬಡ ಕುಟುಂಬದ ಮಕ್ಕಳಿಗೆ ಇಲಾಖೆ ಮೂಲಕ ಉತ್ತಮ ನೆರವು ಕೊಡಿಸುತ್ತಿದ್ದಾರೆ ಎಂದು ತಿಳಿಸಿದರು.
ಕಣಚೂರು ವಿದ್ಯಾಸಂಸ್ಥೆ ಶೇ.100 ರಷ್ಟು ಫಲಿತಾಂಶ ಪಡೆದಿರುವುದು ಸಂತೋಷಕರ ಎಂದು ಅವರು ಹೇಳಿದರು.
ಕೆಎಂಡಿಸಿ ಅರಿವು ಯೋಜನೆಯಡಿ ಮೂರು ಲಕ್ಷ ರೂ. ಸಾಲ ಪಡೆದ ರಾಯಚೂರಿನ ಮೊಹಮದ್ ಅನ್ನಾನ್, ಶಿವಮೊಗ್ಗದ ಮೊಹಮದ್ ಸಲ್ಮಾನ್ ಅಹಮದ್ ಮಾತನಾಡಿ, ಸಾಲ ಸಿಕ್ಕಿದ್ದರಿಂದ ನಮಗೆ ತುಂಬಾ ಅನುಕೂಲ ಆಗಿದೆ. ಸಾಲದ ಮೊತ್ತ ಐದು ಲಕ್ಷ ರೂ. ಹೆಚ್ಚಿಸುವ ಪ್ರಸ್ತಾಪದಿಂದ ನಮ್ಮಂತಹ ಬಡ ಕುಟುಂಬದ ಮಕ್ಕಳಿಗೆ ವರದಾನ ಆಗಲಿದೆ. ಇಂತಹ ಕ್ರಮಕ್ಕೆ ಮುಂದಾದ ಸಚಿವ ಜಮೀರ್ ಅಹಮದ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್,
ಸಂಸ್ಥೆ ಮುಖ್ಯಸ್ಥ ಡಾ. ಹಾಜಿ ಯು ಕೆ ಮೋನು, ಡಾ. ಯು. ಟಿ.ಇಫ್ತಾಕಾರ್ ಅಲಿ, ಜಿ. ಎ. ಬಾವ, ಅಬ್ದುಲ್ ರೆಹಮಾನ್, ಮುಕುಲ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಹಾಗೂ ರಹೀಮ್ ಖಾನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು