8:59 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು