3:59 AM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿ ಬಂದ್ ಫಲಶೃತಿ: ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಆರಂಭ

25/07/2022, 13:21

ಬೆಂಗಳೂರು(reporterkarnataka.com): ಶಿರಾಡಿ ಘಾಟ್ ಬಂದ್ ಆದ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು

 ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ವಿಮಾನ ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರು-ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯ ರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.

ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಕುರಿತು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣ ದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು