10:04 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶಿರಾಡಿ ಘಾಟ್ ಸುರಂಗ ಮಾರ್ಗ ರಚನೆ: ತಜ್ಞರ ತಂಡದಿಂದ ಪರಿಶೀಲನೆ ಆರಂಭ; ಪರಿಸರವಾದಿ ಸಂಘಟನೆಗಳಿಂದ ವಿರೋಧ

06/01/2022, 13:41

ಅಶೋಕ್ ಕಲ್ಲಡ್ಕ ಮಂಗಳೂರು

ರಾಜೇಶ್ವರಿ ಸಕಲೇಶಪುರ ಹಾಸನ

info.reporterkarnataka@gmail.om

ಬಂದರು ನಗರಿ ಮಂಗಳೂರು ಹಾಗೂ ರಾಜಧಾನಿ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಂಗ ಮಾರ್ಗ ರಚನೆ ಕುರಿತು ಮೂವರು ತಜ್ಞರ ತಂಡ ಪರಿಶೀಲನೆ ಆರಂಭಿಸಿದೆ.

ದಕ್ಷಿಣ ಕನ್ನಡ ಮತ್ತು ಸಕಲೇಶಪುರ ನಡುವೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುಮಾರು 23.6 ಕಿಮೀ. ಉದ್ದದ ಸುರಂಗ ಮಾರ್ಗವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಕಡಲ ನಗರಿ ಮಂಗಳೂರಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಲಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಪ್ರತಿ ಮಳೆಗಾಲದಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ರಚನೆ ಪ್ರಸ್ತಾಪಿಸಲಾಗಿದೆ. ಇಷ್ಟೇ ಅಲ್ಲದೆ ಸುರಂಗ ಮಾರ್ಗ ರಚನೆ ಎಕ್ಸ್ ಪ್ರೆಸ್ ವೇಗೆ ಹಾದಿ ಮಾಡಿಕೊಡಲಿದೆ. ಬಂದರು ನಗರಿ ಮಂಗಳೂರಿನಲ್ಲಿ ಇದು ಕೈಗಾರಿಕಾ ಅಭಿವೃದ್ಧಿಗೂ ಪೂರಕವಾಗಲಿದೆ ಎನ್ನಲಾಗಿದೆ.

ಹಾಸನ – ಸಕಲೇಶಪುರ – ಮಾರನಹಳ್ಳಿ ವರೆಗಿನ ಹಲವಾರು ರಸ್ತೆ ಬಳಕೆದಾರರು ರಸ್ತೆಯ ಕಳಪೆ ಸ್ಥಿತಿಯ ಬಗ್ಗೆ ಈಗಾಗಲೇ ಕಳವಳ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಡಳಿತ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಬಂದರು ನಗರ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಶಾಶ್ವತವಾಗಿ ಸರಿಪಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಮಾರೇನಹಳ್ಳಿ ಅಣೆಕಟ್ಟಿನಲ್ಲಿ ದುರಸ್ತಿ ಕಾರ್ಯ ಪ್ರಾರಂಭವಾಗಿದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ.  


ಈ ನಡುವೆ ಶಿರಾಡಿ ಘಾಟ್ ನಲ್ಲಿ ಸುರಂಗ ರಸ್ತೆ ಯೋಜನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುರಂಗ ಮಾರ್ಗ ರಚನೆಯಿಂದ

ಪಶ್ಚಿಮ ಘಟ್ಟಗಳು ಮತ್ತಷ್ಟು ಹಾಳಾಗುತ್ತದೆ ಎಂದು ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೈಗಾರಿಕಾ ಸಂಸ್ಥೆಯು ಈ ಪ್ರಸ್ತಾಪನೆಯನ್ನು ಬೆಂಬಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು