11:05 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿಯಲ್ಲಿ ಟನೆಲ್‌ ನಿರ್ಮಾಣ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆ ಸಲ್ಲಿಕೆ

28/06/2024, 21:11

ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಇಂದು ಭೇಟಿಯಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಅವರು ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಭೂ ಸಾರಿಗೆ ಸಚಿವರಿಗೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು.
ರಾಜ್ಯದಲ್ಲಿ 5225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನನೆಗುದಿಗೆ ಬಿದ್ದ ಬಗ್ಗೆ ಮುಖ್ಯ ಮಂತ್ರಿಯವರು ಗಡ್ಕರಿ ಅವರ ಗಮನ ಸೆಳೆದರು.
*ಪ್ರಸ್ತಾವನೆಯಲ್ಲಿ ಸಲ್ಲಿಸಿರುವ ಇತರ ಪ್ರಮುಖ ವಿಷಯಗಳು:*
• ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸುವುದು.
• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ನೀಡುವುದು.
• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು.
* ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ
• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್,ಸಚಿವರಾದ ಕೆ.ಜೆ.ಜಾರ್ಜ್, , ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು