ಇತ್ತೀಚಿನ ಸುದ್ದಿ
ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ: ಎತ್ತಿನಹಳ್ಳದ ಸಮೀಪ ಗುಡ್ಡ ಕುಸಿದು ಸಂಚಾರ ಸ್ಥಗಿತ; ಮೈಲುಗಟ್ಟಲೆ ಟ್ರಾಫಿಕ್ ಜಾಮ್
27/07/2024, 16:15
ಹಾಸನ(reporterkarnataka.com): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಗಾಳಿಮಳೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಶಿರಾಡಿ ಘಾಟಿಯ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಕಿಲೋಮೀಟರ್ಗಟ್ಟಲೆ ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ. ಗುಡ್ಡೆ ಕುಸಿತಕ್ಕೆ ಆಮೆಗತಿಯ
ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜೂನ್ 18 ರಂದು ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದರು. ಆದರೆ ಇಂದು ಮತ್ತೊಮ್ಮೆ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಸ್ತೆಯಿಂದ
ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.