1:32 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಶಿರಾಳಕೊಪ್ಪ: ಫ.ಗು. ಹಳಕಟ್ಟಿ ದತ್ತಿ ಕಾರ್ಯಕ್ರಮ ಉದ್ಘಾಟನೆ, ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

14/10/2023, 23:16

ಶಿರಾಳಕೊಪ್ಪ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ ಕಾರ್ಯಕ್ರಮ ಉದ್ಘಾಟನೆ ಮತ್ತು ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸುವ ಸಮಾರಂಭ ನಡೆಯಿತು.
ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಿದರು. ಟಿ. ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ವಸಂತಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಎಚ್. ಎಸ್. ರಘು, ಉಪನ್ಯಾಸಕರಾದ ಪಿ. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದತ್ತಿ ದಾನಿಗಳಾದ ದಿ. ಫಕೀರವ್ವ ಅವರ ಅಗಲಿಕೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗೌರಮ್ಮ ಸ್ವಾಗತಿಸಿದರು. ಚಂದ್ರಶೇಖರ ನಿರೂಪಿಸಿದರು. ಕಜಾಪ ಜಿಲ್ಲಾ ಕಾರ್ಯದರ್ಶಿ ಸೋಮಿನಕಟ್ಟಿ, ಪತ್ರಕರ್ತರಾದ ಶೇಷಗಿರಿ, ಡಾ. ಮುರುಘರಾಜ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು