5:21 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ

12/10/2021, 19:01

ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ.

ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾಧಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ ಎನ್ನಲಾಗಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿಯಾಗಿದ್ದ. ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. 

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು