11:03 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಶಿರ್ತಾಡಿ ಗ್ರಾಪಂ: ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ, ಉದ್ಯಾನವನ ಉದ್ಘಾಟನೆ

13/08/2022, 21:08

ಮೂಡಬಿದ್ರೆ(reporterkarnataka.com) : ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ತಾಡಿ ಗ್ರಾಮ ಪಂಚಾಯತ್‌ನಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಹಾಗೂ ಉದ್ಯಾನವನದ ಉದ್ಘಾಟನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟನೆಯನ್ನು ನೆರವೇರಿಸಿ, ಭಾರತಕ್ಕೆ ಸ್ವಾತಂತ್ರ್ಯ ಸುಲಭದಲ್ಲಿ ದೊರಕಿಲ್ಲ, ಬಲಿದಾನಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಈ ಸ್ವಾತಂತ್ರ್ಯವನ್ನು ಉಳಿಸುವ ಕರ್ತವ್ಯ ನಮ್ಮದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭ ಪ್ರತೀ ಮನೆಯಲ್ಲೂ ಗೌರವಯುತವಾಗಿ ರಾಷ್ಟ್ರ ಧ್ವಜವನ್ನು ಹಾರಾಡಿಸಬೇಕು ಎಂದರು.

ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿ ಶಿರ್ತಾಡಿಯ ಅಭಿವೃದ್ಧಿಗೆ ಉದ್ಯಾನವನ ಹಾಗೂ ಪ್ರತಿಮೆ ಹೊಸ ಸೇರ್ಪಡೆಯಾಗಿದೆ. ಶಿರ್ತಾಡಿಯಲ್ಲಿ ಸುಸಜ್ಕಿತ ಬಸ್ ನಿಲ್ದಾಣ, ಮಾರುಕಟ್ಟೆ, ಮೆಸ್ಕಾಂ ಸೆಕ್ಷನ್ ಕಚೇರಿ, ಪ್ರತೀ ಸರಕಾರಿ ಶಾಲೆಗಳಿಗೂ ವಾಹನ ವ್ಯವಸ್ಥೆ ಮುಂತಾದ ಯೋಜನೆಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಡೊಂಬಯ್ಯ ಶೆಟ್ಟಿ, ಕಾರ್ಯದರ್ಶಿ ನವಾನಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟರಮಣ ಪ್ರಕಾಶ್ ಕೆ., ವಾಲ್ಪಾಡಿಯ ರಮೇಶ್ ರಾಥೋಡ್, ವಾಲ್ಪಾಡಿ ಪಂಚಾಯತ್ ಅಧ್ಯಕ್ಷ ಪ್ರದೀಪ್ ಕುಮಾರ್, ಪಂಚಾಯತ್ ಸದಸ್ಯರುಗಳು, ಆಸುಪಾಸಿನ ಪಂಚಾಯತಿನ ಸದಸ್ಯರುಗಳು, ವಿವಿಧ ಸಂಘಟನೆಗಳ ಮುಖಂಡರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಅಗ್ನಿಶಾಮಕ ದಳದ ನಿವೃತ್ತ ಅಧಿಕಾರಿ ಯೋಗೀಶ್ ಬಂಗೇರ, ಪಂಚಾಯತ್ ಸದಸ್ಯ ಸೌಹಾರ್ದ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸೌಹಾರ್ದ ಫ್ರೆಂಡ್ಸ್ ಕ್ಲಬ್‌ನಿಂದ ಉಚಿತವಾಗಿ ನೀಡಿದ  ಆಂಬ್ಯುಲೆನ್ಸ್ ನಿರ್ವಹಣೆಗಾಗಿ ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ವೈಯಕ್ತಿಕವಾಗಿ 10 ಸಾವಿರ ನಗದು ನೀಡಿದರು.

ಪಂಚಾಯತ್ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ, ಹರ್ ಘರ್ ತಿರಂಗ ಪ್ರದರ್ಶನ, ವಿಕಲಚೇತನರಿಗೆ ಚೆಕ್ ವಿತರಣೆ, ಹಳೆ ಮನೆ ದುರಸ್ಥಿಗಾಗಿ ಕಮಲ ಹಾಗೂ ಶಾಂತಾರಿಗೆ ಸಹಾಯಧನ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಿಸಿ ನೀರಿನ ಬಾಟಲ್ ವಿತರಣೆ ನೆರವೇರಿತು.

ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೆ ಗೈರಾದ  ಪಂಚಾಯಿತಿ ಸದಸ್ಯರು- ಪಂಚಾಯತ್ ಅಭಿವೃದ್ಧಿಯನ್ನೇ ಗಮನದಲ್ಲಿಟ್ಟುಕೊಂಡು ಆಯ್ಕೆಯಾದ ಶಿರ್ತಾಡಿ ಪಂಚಾಯತ್ ವ್ಯಾಪ್ತಿಯ ಹಲವು ಸದಸ್ಯರು ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು, ರಾಜಕಾರಣವನ್ನು ಹೊರತುಪಡಿಸಿ ಪಂಚಾಯತ್ ಸದಸ್ಯರ ನೇಮಕವಾಗುತ್ತದೆ ಎಂಬುದನ್ನು ಮರೆತ ಹಲವು ಸದಸ್ಯರು, ಶಾಸಕರು ಮತ್ತು ನಿಕಟ ಪೂರ್ವ ಶಾಸಕರು ಭಾಗವಹಿಸಿದ ಅಭಿವೃದ್ಧಿ  ಮತ್ತು ಸವಲತ್ತು ವಿತರಣ  ಕಾರ್ಯಕ್ರಮದಲ್ಲಿ ಹಲವು ಸದಸ್ಯರು ಭಾಗವಹಿಸದೆ ಇರುವುದು ಜನರಿಗೆ ಮಾಡಿದ ಅವಮಾನ ಎಂಬುದು ಹಲವು ನಾಗರೀಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು