2:37 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಶಿರೂರು; ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು: ಫೇಸ್ ಬುಕ್ ಗೆಳೆಯನ ಕೃತ್ಯ

21/11/2022, 19:45

ಕುಂದಾಪುರ(reporterkarnataka.com); ಫೇಸ್ ಬುಕ್ ಮೂಲಕ ಪರಿಚಯಗೊಂಡ ಸ್ನೇಹಿತನೊಬ್ಬ ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶಿರೂರು ಗ್ರಾಮದ ಮೇಲ್ಪೇಟೆ ನಿವಾಸಿ ಸಂತೋಷ ಮೊಗವೀರ(34) ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಯಕ್ಷಗಾನ ಕಲಾವಿದರಾಗಿದ್ದು, ಚಿಕ್ಕ ಮೇಳ ಎಂಬ ಯಕ್ಷಗಾನವನ್ನು ನಡೆಸಿಕೊಂಡಿದ್ದರು. ಇವರು ಮೇಳದ ಸಾಮಾಗ್ರಿಗಳೊಂದಿಗೆ ಶಿರೂರು ಗ್ರಾಮದ ಶಿರೂರು ಮೇಲ್ಪೆಟೆ ಎಂಬಲ್ಲಿ ಸುಭಾಷ್ ಪ್ರಭು ಅವರ ಒಂದು ಕೊಠಡಿಯಲ್ಲಿ ವಾಸವಾಗಿದ್ದರು. ಇವರಿಗೆ ಎರಡು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ‌ ಗುರುರಾಜ್ ಎಂಬವ ಪರಿಚಯವಾಗಿತ್ತು.

ನ.9ರಂದು ಸಂತೋಷ್ ಅವರ ಕೊಠಡಿಗೆ ಬಂದು ಅವರೊಂದಿಗೆ ಉಳಿದುಕೊಂಡಿದ್ದನು. ನ. 12ರಂದು ಸಂತೋಷ್ ಅವರು ಚಿಕ್ಕ ಮೇಳ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ತಾಲೂಕಿನ ಹೆರಿಕುದ್ರು ಎಂಬಲ್ಲಿಗೆ ಹೊರಟಿದ್ದರು. ಅವರೊಂದಿಗೆ ಗುರುರಾಜ್ ಕೂಡ ಹೋಗಿದ್ದನು. ಈ ವೇಳೆ ಗುರುರಾಜ್ ಕಾರ್ಯಕ್ರಮ ವಿಡಿಯೋ ಮಾಡುವ ಉದ್ದೇಶದಿಂದ ಸಂತೋಷ್ ಅವರ ಮೊಬೈಲ್ ಪಡೆದಿದ್ದನು. ಬಳಿಕ ಅವರಿಗೆ ತಿಳಿಸದೇ ಶಿರೂರು ಮೇಲ್ಪೆಟೆಗೆ ಬಂದು ಸಂತೋಷ್ ವಾಸ್ಥವ್ಯವಿರುವ ಕೊಠಡಿಯ ಬೀಗವನ್ನು ಒಡೆದು ಬ್ಯಾಗ್ ನಲ್ಲಿಟ್ಟಿದ್ದ 12 ಗ್ರಾಂ  ತೂಕದ ಚಿನ್ನದ ಕೊರಳಿನ ಚೈನ್, 4 ಗ್ರಾಂ ತೂಕದ ಚಿನ್ನದ ಉಂಗುರ, ಕಾಣಿಕೆ ಡಬ್ಬಿಯಲ್ಲಿದ್ದ 10 ಸಾವಿರ ನಗದು, ಇನ್ನೊಂದು ಡಬ್ಬಿಯಲ್ಲಿದ್ದ 1 ಸಾವಿರ ರೂ. ನಗದು ಹಾಗೂ 14 ಸಾವಿರ ಮೌಲ್ಯದ Realme ಮೊಬೈಲ್ ಫೋನ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 85 ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .  

ಇತ್ತೀಚಿನ ಸುದ್ದಿ

ಜಾಹೀರಾತು