7:49 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಿರ್ವ: ಎರಡು ಬೈಕ್ ಪರಸ್ಪರ ಡಿಕ್ಕಿ; ಹೇರೂರು ನಿವಾಸಿ ಗೃಹಿಣಿ ಸ್ಥಳದಲ್ಲೇ ಸಾವು

14/11/2021, 08:55

ಶಿರ್ವ( reporterkarnataka.com): ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ‌ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಭಾಷ್ ನಗರದ ಕುರ್ಕಾಲು ಜಂಕ್ಷನ್ ನಲ್ಲಿ ನಡೆದಿದೆ.

ಮೃತರನ್ನು ಹೇರೂರು ಗ್ರಾಮದ ನಿವಾಸಿ ಶರ್ಮಿಳಾ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಶಾಲೆಯಲ್ಲಿ ಪರಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶರ್ಮಿಳಾ ಅವರು ಶನಿವಾರ ಬೆಳಿಗ್ಗೆ ತಮ್ಮ ಪತಿ ಸುರೇಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೇರೂರಿನಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದರು. ಕುರ್ಕಾಲು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ. ಎದುರಿನಿಂದ ಬಂದ ಬೈಕ್ ಸವಾರ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಎದುರಿನ ಬೈಕ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತವಾದ ರಭಸಕ್ಕೆ ಶರ್ಮಿಳಾ ಅವರು ರಸ್ತೆಗೆ ಬಿದ್ದಿದ್ದು, ಇದರಿಂದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು